ಯೆರೆಮೀಯ 46:21 - ಕನ್ನಡ ಸಮಕಾಲಿಕ ಅನುವಾದ21 ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ; ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು. ಅಧ್ಯಾಯವನ್ನು ನೋಡಿ |