ಯೆರೆಮೀಯ 46:25 - ಕನ್ನಡ ಸಮಕಾಲಿಕ ಅನುವಾದ25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನೋ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |