ಯೆರೆಮೀಯ 46:5 - ಕನ್ನಡ ಸಮಕಾಲಿಕ ಅನುವಾದ5 ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು. ಅಧ್ಯಾಯವನ್ನು ನೋಡಿ |