Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:8 - ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; ಅದರ ನೀರು ನದಿಗಳ ಹಾಗೆ ಕದಲುತ್ತವೆ; ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ನದಿ ಉಬ್ಬಿದೆ, ನೈಲ್ ನದಿಯಂತೆ ಈಜಿಪ್ಟೆಂಬ ಪ್ರವಾಹವೇ ತುಂಬಿ ತುಳುಕುತ್ತಿದೆ ನೈಲಿನ ಶಾಖೆಗಳಂತೆ, ‘ನಾನು ಉಬ್ಬಿಕೊಂಡು ಲೋಕದೊಳಗೆಲ್ಲಾ ಹಬ್ಬುವೆನು ನಗರಗಳನ್ನೂ ಅವುಗಳ ನಿವಾಸಿಗಳನ್ನೂ ನಾಶಮಾಡುವೆನು’ ಎಂದುಕೊಳ್ಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಐಗುಪ್ತವೇ ನೈಲಿನಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣನಿವಾಸಿಗಳನ್ನು ನಾಶಮಾಡುವೆನು ಅಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಬಲಿಷ್ಠವಾಗಿಯೂ ಮತ್ತು ರಭಸವಾಗಿಯೂ ಹರಿಯುವ ನದಿಯಂತೆ ಬರುತ್ತಿದೆ. ‘ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು’ ಎಂದು ಈಜಿಪ್ಟ್ ಹೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:8
7 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು