Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:9 - ಕನ್ನಡ ಸಮಕಾಲಿಕ ಅನುವಾದ

9 ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:9
14 ತಿಳಿವುಗಳ ಹೋಲಿಕೆ  

“ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು. ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.


ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.


ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,


ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.


ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.


ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು