Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:2
32 ತಿಳಿವುಗಳ ಹೋಲಿಕೆ  

“ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.


ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.


ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.


ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.


ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.


ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.


ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”


ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು