Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:3 - ಕನ್ನಡ ಸಮಕಾಲಿಕ ಅನುವಾದ

3 ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:3
14 ತಿಳಿವುಗಳ ಹೋಲಿಕೆ  

ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.


ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ, ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ. ಅವು ಉರಿಯುವ ಪಂಜುಗಳಂತೆ ಕಾಣುತ್ತವೆ; ಅವರು ಮಿಂಚಿನಂತೆ ಸುತ್ತಾಡುತ್ತಾರೆ.


ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.


ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಅವರ ರಥಗಳ ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು