Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:4
27 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.


ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು