Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:6 - ಕನ್ನಡ ಸಮಕಾಲಿಕ ಅನುವಾದ

6 “ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:6
20 ತಿಳಿವುಗಳ ಹೋಲಿಕೆ  

ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.


“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.


ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.


ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.


ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು