Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:17 - ಕನ್ನಡ ಸಮಕಾಲಿಕ ಅನುವಾದ

17 ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ, ‘ಬಲವಾದ ಕೋಲೂ, ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಅರಿತವರೇ, ನೀವೆಲ್ಲರು ಅದಕ್ಕಾಗಿ ಎದೆಬಡಿದುಕೊಳ್ಳಿ ! ‘ಅಯ್ಯೋ, ಶಕ್ತಿಯುತ ಚೆಂಗೋಲು, ಮಹಿಮೆಯ ದಂಡಕೋಲು ಮುರಿದುಹೋಯಿತಲ್ಲಾ!’ ಎಂದು ಪ್ರಲಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ; ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ ಎಂದು ಪ್ರಲಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:17
12 ತಿಳಿವುಗಳ ಹೋಲಿಕೆ  

ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”


ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು