ಯೆರೆಮೀಯ 48:18 - ಕನ್ನಡ ಸಮಕಾಲಿಕ ಅನುವಾದ18 “ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯುವತಿಯೇ, ದೀಬೋನ್‍ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕೂತುಕೋ! ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ. ಅಧ್ಯಾಯವನ್ನು ನೋಡಿ |