Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:19 - ಕನ್ನಡ ಸಮಕಾಲಿಕ ಅನುವಾದ

19 ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿ ಹೋಗುವವನನ್ನೂ, ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರೋಯೇರಿನವರೇ, ದಾರಿ ಮಗ್ಗುಲಲ್ಲಿ ನಿಂತು ನೋಡಿ ! ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತೆಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತು ಎಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿಹೋಗುವದನ್ನು ನೋಡಿರಿ. ಆ ಹೆಂಗಸು ಓಡಿಹೋಗುವದನ್ನು ನೋಡಿರಿ. ಏನಾಯಿತೆಂದು ಅವರನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:19
10 ತಿಳಿವುಗಳ ಹೋಲಿಕೆ  

ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.


ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.


ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.


ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.


ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.


ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು