Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:26 - ಕನ್ನಡ ಸಮಕಾಲಿಕ ಅನುವಾದ

26 “ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:26
37 ತಿಳಿವುಗಳ ಹೋಲಿಕೆ  

ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.


ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.


ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.


ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.


ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು