ಯೆರೆಮೀಯ 48:30 - ಕನ್ನಡ ಸಮಕಾಲಿಕ ಅನುವಾದ30 ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, ಎಂದು ಯೆಹೋವ ದೇವರು ಅನ್ನುತ್ತಾರೆ; “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಅವರ ಗರ್ವೋದ್ರೇಕ ನನಗೆ ಗೊತ್ತಿದೆ. ಅದು ಬರೀ ಬುರುಡೆ ಮಾತ್ರ. ಅವರು ಕೊಚ್ಚಿಕೊಳ್ಳುವುದೆಲ್ಲ ನಿರರ್ಥಕವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಹೇಳುವದೇನಂದರೆ - ಅವರ ಗರ್ವೋದ್ರೇಕವು ನನಗೆ ಗೊತ್ತು. ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವದೆಲ್ಲಾ ನಿರರ್ಥಕ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು. ಅಧ್ಯಾಯವನ್ನು ನೋಡಿ |