Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:41 - ಕನ್ನಡ ಸಮಕಾಲಿಕ ಅನುವಾದ

41 ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:41
16 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.


ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.


ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.


ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?


ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.


ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಬೊಚ್ರ, ಕೆರೀಯೋತ್, ಹೀಗೆ ಸಮೀಪದಲ್ಲಾಗಲಿ, ದೂರದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.


ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು