ಯೆರೆಮೀಯ 49:13 - ಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.” ಅಧ್ಯಾಯವನ್ನು ನೋಡಿ |
ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.