ಯೆರೆಮೀಯ 49:15 - ಕನ್ನಡ ಸಮಕಾಲಿಕ ಅನುವಾದ15 “ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ [ಎದೋಮೇ,] ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.