Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋವಿುನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳುಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:18
16 ತಿಳಿವುಗಳ ಹೋಲಿಕೆ  

ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು