ಯೆರೆಮೀಯ 49:19 - ಕನ್ನಡ ಸಮಕಾಲಿಕ ಅನುವಾದ19 “ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.” ಅಧ್ಯಾಯವನ್ನು ನೋಡಿ |