ಯೆರೆಮೀಯ 49:23 - ಕನ್ನಡ ಸಮಕಾಲಿಕ ಅನುವಾದ23 ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ. ಅಧ್ಯಾಯವನ್ನು ನೋಡಿ |