Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:29 - ಕನ್ನಡ ಸಮಕಾಲಿಕ ಅನುವಾದ

29 ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:29
21 ತಿಳಿವುಗಳ ಹೋಲಿಕೆ  

ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.


ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.


ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.


ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.


ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು