Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:3 - ಕನ್ನಡ ಸಮಕಾಲಿಕ ಅನುವಾದ

3 “ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:3
28 ತಿಳಿವುಗಳ ಹೋಲಿಕೆ  

ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.


ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.


ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.


ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?


ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ.


ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.


ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.


ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 223


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು