Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:30 - ಕನ್ನಡ ಸಮಕಾಲಿಕ ಅನುವಾದ

30 “ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಇಂತೆನ್ನುತ್ತಾನೆ - ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶನಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:30
4 ತಿಳಿವುಗಳ ಹೋಲಿಕೆ  

ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು