Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:33 - ಕನ್ನಡ ಸಮಕಾಲಿಕ ಅನುವಾದ

33 ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:33
13 ತಿಳಿವುಗಳ ಹೋಲಿಕೆ  

ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.


ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು