ಯೆರೆಮೀಯ 49:4 - ಕನ್ನಡ ಸಮಕಾಲಿಕ ಅನುವಾದ4 ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.” ಅಧ್ಯಾಯವನ್ನು ನೋಡಿ |