ಯೆರೆಮೀಯ 49:5 - ಕನ್ನಡ ಸಮಕಾಲಿಕ ಅನುವಾದ5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.” ಅಧ್ಯಾಯವನ್ನು ನೋಡಿ |