Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:9 - ಕನ್ನಡ ಸಮಕಾಲಿಕ ಅನುವಾದ

9 ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನಲ್ಲಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸುತ್ತಿದ್ದರಲ್ಲವೆ? ಕಳ್ಳರು ರಾತ್ರಿವೇಳೆಯಲ್ಲಿ ಮನೆಗೆ ನುಗ್ಗಿದರೆ ತಮಗೆ ಸಾಕಾಗುವಷ್ಟನ್ನು ಮಾತ್ರ ಕೊಳ್ಳೆಹೊಡೆಯುತ್ತಿದ್ದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:9
4 ತಿಳಿವುಗಳ ಹೋಲಿಕೆ  

ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.


“ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು