Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:12 - ಕನ್ನಡ ಸಮಕಾಲಿಕ ಅನುವಾದ

12 ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:12
25 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ,


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು