ಯೆರೆಮೀಯ 5:15 - ಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.