ಯೆರೆಮೀಯ 5:2 - ಕನ್ನಡ ಸಮಕಾಲಿಕ ಅನುವಾದ2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.” ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.