ಯೆರೆಮೀಯ 5:24 - ಕನ್ನಡ ಸಮಕಾಲಿಕ ಅನುವಾದ24 ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿ |