ಯೆರೆಮೀಯ 5:28 - ಕನ್ನಡ ಸಮಕಾಲಿಕ ಅನುವಾದ28 ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು. ಅಧ್ಯಾಯವನ್ನು ನೋಡಿ |