Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:6 - ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:6
38 ತಿಳಿವುಗಳ ಹೋಲಿಕೆ  

ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.


“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.


ಆದರೂ ಅವಳು ಈಜಿಪ್ಟ್ ದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿದಳು.


ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.


ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.


ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.


ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.


ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.


ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.


ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು