ಯೆರೆಮೀಯ 50:12 - ಕನ್ನಡ ಸಮಕಾಲಿಕ ಅನುವಾದ12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು. ಅಧ್ಯಾಯವನ್ನು ನೋಡಿ |