Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:16 - ಕನ್ನಡ ಸಮಕಾಲಿಕ ಅನುವಾದ

16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:16
7 ತಿಳಿವುಗಳ ಹೋಲಿಕೆ  

ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.


“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’


ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.


ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.


ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.


ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು