Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:18
11 ತಿಳಿವುಗಳ ಹೋಲಿಕೆ  

ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”


ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.


ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು