Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:2 - ಕನ್ನಡ ಸಮಕಾಲಿಕ ಅನುವಾದ

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:2
34 ತಿಳಿವುಗಳ ಹೋಲಿಕೆ  

ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,


ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.


ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಆದ್ದರಿಂದ ಜನಾಂಗಗಳೇ, ಕೇಳಿರಿ; ಓ ಸಾಕ್ಷಿಗಳೇ, ಅವರಲ್ಲಿ ಇರುವಂಥದ್ದನ್ನು ತಿಳಿದುಕೊಳ್ಳಿರಿ.


“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.


ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?


“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು