ಯೆರೆಮೀಯ 50:28 - ಕನ್ನಡ ಸಮಕಾಲಿಕ ಅನುವಾದ28 ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.