ಯೆರೆಮೀಯ 50:3 - ಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.” ಅಧ್ಯಾಯವನ್ನು ನೋಡಿ |