Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:33 - ಕನ್ನಡ ಸಮಕಾಲಿಕ ಅನುವಾದ

33 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:33
16 ತಿಳಿವುಗಳ ಹೋಲಿಕೆ  

ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”


ಕಳುಹಿಸುವುದಕ್ಕೆ ನಿರಾಕರಿಸಿದರೆ, ನಾನು ನಿನ್ನ ದೇಶವನ್ನೆಲ್ಲಾ ಕಪ್ಪೆಗಳಿಂದ ಉಪದ್ರವ ತರುವೆನು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.


ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು