Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:36 - ಕನ್ನಡ ಸಮಕಾಲಿಕ ಅನುವಾದ

36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:36
22 ತಿಳಿವುಗಳ ಹೋಲಿಕೆ  

ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.


ಇಗೋ, ನಿನ್ನ ಸೈನ್ಯಗಳನ್ನು ನೋಡು. ಅವರೆಲ್ಲರೂ ಮಹಿಳೆಯರೇ. ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ವಿಶಾಲವಾಗಿ ತೆರೆದಿವೆ. ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಟ್ಟಿದೆ.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”


ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”


ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, ಎಂದು ಯೆಹೋವ ದೇವರು ಅನ್ನುತ್ತಾರೆ; “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು