Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:37 - ಕನ್ನಡ ಸಮಕಾಲಿಕ ಅನುವಾದ

37 ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:37
20 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


ಇಗೋ, ನಿನ್ನ ಸೈನ್ಯಗಳನ್ನು ನೋಡು. ಅವರೆಲ್ಲರೂ ಮಹಿಳೆಯರೇ. ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ವಿಶಾಲವಾಗಿ ತೆರೆದಿವೆ. ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಟ್ಟಿದೆ.


ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.


ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.


ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.


ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.


ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು. ಅದರ ಬೀದಿಗಳಲ್ಲಿಯೇ ಕತ್ತಿಗೆ ತುತ್ತಾಗುವರು.


ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು