Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:45 - ಕನ್ನಡ ಸಮಕಾಲಿಕ ಅನುವಾದ

45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:45
9 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು