Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:46 - ಕನ್ನಡ ಸಮಕಾಲಿಕ ಅನುವಾದ

46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:46
14 ತಿಳಿವುಗಳ ಹೋಲಿಕೆ  

ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’


ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


“ಬಾಬಿಲೋನಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ದೊಡ್ಡ ನಾಶದ ಶಬ್ದವೂ ಬರುವುದು.


ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು