Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:13 - ಕನ್ನಡ ಸಮಕಾಲಿಕ ಅನುವಾದ

13 ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:13
24 ತಿಳಿವುಗಳ ಹೋಲಿಕೆ  

ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.


ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


“ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.


ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.


“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು