Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:14 - ಕನ್ನಡ ಸಮಕಾಲಿಕ ಅನುವಾದ

14 ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:14
13 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.


ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.


ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು