ಯೆರೆಮೀಯ 51:19 - ಕನ್ನಡ ಸಮಕಾಲಿಕ ಅನುವಾದ19 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಯಾಕೋಬ್ಯರ ಸ್ವಾಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಅಧ್ಯಾಯವನ್ನು ನೋಡಿ |