ಯೆರೆಮೀಯ 51:27 - ಕನ್ನಡ ಸಮಕಾಲಿಕ ಅನುವಾದ27 “ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ. ಅಧ್ಯಾಯವನ್ನು ನೋಡಿ |