Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:29 - ಕನ್ನಡ ಸಮಕಾಲಿಕ ಅನುವಾದ

29 ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:29
25 ತಿಳಿವುಗಳ ಹೋಲಿಕೆ  

ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.


ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ,


ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.


ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.


ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು. ನೀನು ಎಂದೆಂದಿಗೂ ಹಾಳಾಗುವೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.


ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.


ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು