Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:33 - ಕನ್ನಡ ಸಮಕಾಲಿಕ ಅನುವಾದ

33 ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:33
15 ತಿಳಿವುಗಳ ಹೋಲಿಕೆ  

ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.


ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.


“ಯೆಹೂದವೇ, ನಿನಗೂ ಸಹ, ತಕ್ಕ ಸುಗ್ಗಿಯು ನೇಮಕವಾಗಿದೆ. “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”


ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.


ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”


ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು